ಬೆಳಗಾವಿ : ರಾಜ್ಯದಲ್ಲಿ ಅತ್ಯಂತ ಸುದ್ದಿಯಾಗಿದ್ದ ಮುಡಾ ಹಗರಣ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಆದೇಶಿಸಿ, ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ಸಲ್ಲಿಕೆಯಾದ ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿಜೆ. ಅಬ್ರಾಹಂ, ಮೈಸೂರಿನ ಸ್ನೇಹಮಹಿ ಕೃಷ್ಣ ಹಾಗೂ ಪ್ರದೀಪ ಎಂಬುವವರು ರಾಜ್ಯಪಾರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದರು.