ದಿ.ಉಮೇಶ್ ಕತ್ತಿ ಕುಟುಂಬಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಾಂತ್ವನ

  • 11 Jan 2024 , 7:09 PM
  • Belagavi
  • 151

ಬೆಳಗಾವಿ: ಇತ್ತೀಚೆಗೆ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಬುಧವಾರ ರಾಜ್ಯಪಾಲರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಿ.ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದಾದ ಬಳಿಕ ದಿ.ಉಮೇಶ್ ಕತ್ತಿ ಅವರ ಪತ್ನಿ ಶೀಲಾ ಕತ್ತಿ ಅವರಿಗೆ ಸಾಂತ್ವನ ತಿಳಿಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಮಾಜಿ ಸಂಸದ ಹಾಗೂ ಉಮೇಶ್ ಕತ್ತಿಯವರ ಸಹೋದ ರಮೇಶ್ ಕತ್ತಿ, ಪುತ್ರ ನಿಖಿಲ್ ಕತ್ತಿ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Read All News