ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಘಟಕದಿಂದ ಹರಘರ್ ತ್ರಿವರ್ಣ ಧ್ವಜ ಹಂಚಿಕೆ

  • 15 Jan 2024 , 1:19 AM
  • Belagavi
  • 143

ಬೆಳಗಾವಿ: ಇಂದು ಬೆಳಗಾವಿ ಗ್ರಾಮಾಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯವಾಗಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಧ್ವಜ ಹಂಚಿಕೆ ಕಾರ್ಯಕ್ರಮ.

ಹೌದು ಬೆಳಗಾವಿ ನಗರದ ಗ್ರಾಮೀಣ ಬಿಜೆಪಿ ಕಚೇರಿಯಲ್ಲಿ ನಡೆದ ಹರಘರ್ ತ್ರೀವರ್ಣ ಧ್ವಜವನ್ನ ಬಿಜೆಪಿ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಯಿತು ಇದೇ ಸಂದರ್ಭದಲ್ಲಿ.ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಅವರ ನೇತೃತ್ವದಲ್ಲಿ ಹರಘರ್ ತ್ರಿವರ್ಣ ಧ್ವಜವನ್ನು ಹಂಚಿಕೆ ಮಾಡಲಾಯಿತು.

ಹಾಗೇಯೆ ಈ ಸಭೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವಂತಾಗಬೇಕು ಎಂದು ಕರೆ ನೀಡಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕಾರ್ಯಕರ್ತರಿಗೆ 400 ತ್ರಿವರ್ಣ ಧ್ವಜಗಳನ್ನು ಹಂಚಿಕೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ನಿರೀಕ್ಷಕ ಮಹೇಂದ್ರ,ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಯಲ್ಲೇಶ್ ಕೋಲ್ಕಾರ್, ನಗರ ಜಿಲ್ಲಾಧ್ಯಕ್ಷ ಮಂಜುನಾಥ ಪಮ್ಮಾರ, ಜಿಲ್ಲಾ ಪ್ರಧಾನ ನಿರೀಕ್ಷಕ ಈರಪ್ಪ ಢವಳೇಶ್ವರ, ಸದಸ್ಯ ರಮೇಶ ಹರಿಜನ ಸೇರಿದಂತೆ ಇನ್ನುಳಿದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Read All News