ಕರ್ನಾಟಕದಲ್ಲಿ ವರುಣನ ಆರ್ಭಟದಿಂದ ಭಾರೀ ಹಾನಿ: ತುರ್ತು ಸಭೆ ನಡೆಸಿದ ಸಿಎಂ, ಡಿಸಿಎಂ

  • krishna s
  • 27 Oct 2024 , 10:01 AM
  • Bengaluru
  • 386

ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಮಳೆಯ ಪರಿಣಾಮ ಉಂಟಾದ ಹಾನಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ತುರ್ತು ಸಭೆ ನಡೆಸಿದರು. ರಾಜ್ಯದಲ್ಲಿ ಈ ವರ್ಷ ಸರಾಸರಿ 114 ಮಿಮೀ ಮಳೆಗೆ ಬದಲಾಗಿ 181 ಮಿಮೀ ಮಳೆಯಾಗಿದ್ದು, ಇದು 1901 ರಿಂದ 10ನೇ ಅತಿಹೆಚ್ಚು ಮಳೆಯಾಗಿ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿರುವುದನ್ನು ತೋರಿಸುತ್ತದೆ.

ಸಭೆಯಲ್ಲಿ ಕೃಷಿ ಹಾಗೂ ಮೂಲಸೌಕರ್ಯಗಳಿಗೆ ಆಗಿರುವ ಹಾನಿಯ ಪರಿಶೀಲನೆ ನಡೆಯಿತು. ಭಾರಿ ಮಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಗಳಿಗೆ ಹಾನಿಯಾಗಿದೆ. ಸರ್ಕಾರವು ರೈತರು ಮತ್ತು ನಾಗರಿಕರಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಲು, ತುರ್ತು ಸಮಯದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು.

Read All News