ಭೀಕರ ಅಪಘಾತ: ಸ್ಥಳದಲ್ಲೇ ವಾಹನ ಸವಾರ ಸಾವು

  • Shivaraj Bandigi
  • 12 Jan 2024 , 7:47 PM
  • Belagavi
  • 328

ಅಥಣಿ  : ಅಥಣಿ ತಾಲೂಕಿನ ರಡ್ಡೆರಟ್ಟಿ ಗ್ರಾಮದಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮಲ್ಲಿಕಾರ್ಜುನ ಭಾವಿ (28) ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದಕ್ಕೆ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read All News