ಎಚ್‌ಆರ್‌ಎಸ್‌ಪಿ ನಂಬರ್ ಅಳವಡಿಕೆ ಗಡುವು ವಿಸ್ತರಣೆ

  • krishna s
  • 4 Jan 2025 , 10:37 AM
  • Bengaluru
  • 958

ಬೆಂಗಳೂರು: ಎಚ್‌ಆರ್‌ಎಸ್‌ಪಿ ನಂಬರ್ ಅಳವಡಿಕೆ ಗಡುವನ್ನು ರಾಜ್ಯ ಸಾರಿಗೆ ಇಲಾಖೆ ಆರನೇ ಬಾರಿ ಗಡುವು ವಿಸ್ತರಣೆ ಮಾಡಿದೆ. ಸಾಕಷ್ಟು ಸಮಯ ನೀಡಿದರೂ, ಜನರು ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ. ಹಾಗಾಗಿ ಜ.31ಕ್ಕೆ ಸಮಯ ವಿಸ್ತರಣೆ ಮಾಡಲಾಗಿದ್ದು,2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.

ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೆಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್‌ರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ.

ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

Read All News