ಗಂಗಾವತಿ : ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಪರಿಹರಿಸಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಗಂಗಾವತಿ ನಗರದ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ ಎಫ್ ಐ ನೇತೃತ್ವದಲ್ಲಿ ಗ್ರಾಮೀಣ ಭಾಗದಲ್ಲಿ ಸರಕಾರಿ ಸಾರಿಗೆ ವ್ಯವಸ್ಥೆ ಒದಗಿಸುವಂತೆ ಒತ್ತಾಯಿಸಿತ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಭೇಟಿ ನೀಡಿ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇನೆ, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಹೋಗಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಇರುವ ಅಸಮರ್ಪಕ ಸಾರಿಗೆ ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳ ಸೂಚಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ವೀರೇಶ್ ಬಲಕುಂದಿ, ಯಮನೂರು ಚೌಡಕಿ, ಚಂದ್ರಶೇಖರ ಹಿರೂರು, ವಿರುಪಾಕ್ಷಿ ಪೊಲೀಸ್ ಪಾಟೀಲ್, ಬಾಷಾ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.