ಗಂಗಾವತಿ : ಕೆಸರಹಟ್ಟಿ ಗ್ರಾಮ ಹಾಗೂ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ತಿಳಿಸಿದರು.
ತಾಲ್ಲೂಕಿನ ಕೆಸರಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಗ್ರಾಮ ಪಂಚಾಯತ್ ಕಾರ್ಯಾಲಯ ಕಟ್ಟಡ ಹಾಗೂ ಭಾರತ ನಿರ್ಮಾಣ ಸೇವಾ ಕೇಂದ್ರ ಮತ್ತು ಎನ್ ಆರ್ ಎಲ್ ಎಮ್ ವರ್ಕ ಶೆಡ್ ನೂತನ ಕಟ್ಟಡವನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳನ್ನು ಸಮಗ್ರ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಶಾಸಕರು ಹೇಳಿದರು.
ರಾಷ್ಟ್ರೀಯ ಜಲ್ ಜೀವನ್ ಮಿಷನ್ , ಎನ್ ಆರ್ ಎಲ್ ಎಮ್ ವರ್ಕ ಮತ್ತು ನರೇಗಾ ಕೆಲಸಗಳು ಸೇರಿದಂತೆ ಎಲ್ಲಾ ಕೆಲಸಗಳನ್ನು ಗ್ರಾಮ ಪಂಚಾಯತ್ ಗಳ ಮೂಲಕ ನಡೆಸಿ ಕೊಡಲಾಗುತ್ತದೆ ಎಂದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ, ಉಪಾಧ್ಯಕ್ಷೆ ವಿರುಪಮ್ಮ, ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತ ಗೌಡ ಪಾಟೀಲ್, ಪಿಡಿಓ ಕೃಷ್ಣ ಹೆಚ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ಗ್ರಾಮೀಣ ಅಧ್ಯಕ್ಷ ಡಿ ಕೆ ದುರ್ಗಪ್ಪ, ಮಂಜುನಾಥ ಧಣಿ, ವಿರುಪಾಕ್ಷಿ ಪೊಲೀಸ್ ಪಾಟೀಲ್, ವಿಶ್ವನಾಥ, ಯಮನೂರು ಚೌಡಕಿ, ಚಂದ್ರು ಹಿರೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.