ಹೊಸಪೇಟೆ: ಖಾಲಿ ಇದ್ದ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಇಲ್ಲಿನ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಅಲ್ಪಸಂಖ್ಯಾತ ಮುಖಂಡ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದ್ದು, ಇಂದು ಅಧಿಕಾರ ಸ್ವೀಕರಿಸಿದರು.
ಸರಳ, ಸಜ್ಜನಿಕೆಯ ಮೊಹಮ್ಮದ್ ಇಮಾಮ್ ನಿಯಾಜಿ ಅವರ ನೇಮಕಕ್ಕೆ ಹಲವಾರು ಮುಖಂಡರು ಸ್ವಾಗತಿಸಿ, ಅಭಿನಂದಿಸಿದ್ದಾರೆ.
ಸರಕಾರದ ಅಧೀನ ಕಾರ್ಯದರ್ಶಿ (ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ) ಲತಾ.ಕೆ ಅವರು ಶುಕ್ರವಾರದಂದು
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ವರದಿ : ರವಿಚಂದ್ರ ಬಿ ಬಿಡಿಗೇರ