ಚಿಕ್ಕೋಡಿ: ಸಚಿವ ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ ಇಂದು ಸಂಜೆ ಸ್ವ ಗ್ರಾಮಕ್ಕೆ ಉಮೇಶ್ ಕತ್ತಿ ಪಾರ್ಥಿವ ಶರೀರ ಮಣ್ಣು ಮಾಡಲಿದ್ದಾರೆ.
ಸ್ವ ಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗಿದ್ದು, 11 ಗಂಟೆಗೆ ಸುಮಾರಿಗೆ ಸ್ವ ಗ್ರಾಮ ಬೆಲ್ಲದ ಬಾಗೇವಾಡಿ ಉಮೇಶ್ ಕತ್ತಿ ಪಾರ್ಥಿವ ಶರೀರ ಆಗಮನದ ನಿರೀಕ್ಷೆ ಇದೆ.
ಉಮೇಶ್ ಕತ್ತಿ ಒಡೆತನದ ವಿಶ್ವರಾಜ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಾಲಾಗಿದೆ. ಮಳೆ ಹಿನ್ನಲೆ ಪೇಂಡಾಲ ಹಾಕಿ ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ತಯಾರಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮ.ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗೆ ಸಿದ್ದತೆ. ಕತ್ತಿ ಮನೆತನದ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ. ತಂದೆ ವಿಶ್ವನಾಥ ಕತ್ತಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ.