ದೆಹಲಿ :ಕ್ವೀನ್ ಎಲಿಜಬೆತ್ II ರವರು ಸೆಪ್ಟೆಂಬರ್ 8, 2022 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ.
ಶೋಕಾಚರಣೆಯ ದಿನದಂದು ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಆ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.