ಕೊಪ್ಪಳ : ನಗರದ ಬಸ್ ನಿಲ್ದಾಣ ಹತ್ತಿರರುವ ಟಿಕೋಟಿಕರ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಗಂಗಾ ಯಮುನಾ ಸೌಹಾರ್ದ
ಸಹಕಾರಿ ಸಂಘ ನಿ, ನೂತನ ಕಟ್ಟಡವನ್ನು ಜೂ.16 ರ ರವಿವಾರ ಬೆಳಿಗ್ಗೆ 10-00 ಗಂಟೆಗೆ ಲಕ್ಷ್ಮೀ-ಗಣಪತಿ ಪೂಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ಅಧ್ಯಕ್ಷ ಗವಿಸಿದ್ದಯ್ಯ ಲಿಂಗಬಸಯ್ಯನಮಠ ತಿಳಿಸಿದ್ದಾರೆ.
ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಶ್ರೀಮಹಾದೇವ ಮಹಾಸ್ವಾಮಿಗಳು, ಮುಂಡರಗಿ, ಮೈನಳ್ಳಿ- ಬಿಕನಳ್ಳಿಯ ಶ್ರೀಸಿದ್ದಲಿಂಗೇಶ್ವರ ಮಹಾಸ್ವಾಮಿಗಳು ದಿವ್ಯಸಾನಿಧ್ಯವಹಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ ತಂಗಡಗಿ, ಜಿಲ್ಲಾಧಿಕಾರಿ ನಲಿನ ಅತುಲ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ, ಅಧ್ಯಕ್ಷ ಜಿ. ನಂಜನಗೌಡ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಹಾಸ್ಯ ಭಾಷಣಕಾರರು ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾವತಿ ಪ್ರಾಣೇಶ ವಿಶೇಷ ಅಹ್ವಾನಿತರಾಗಿ ಆಗಮಿಸುವರು. ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ಅಧ್ಯಕ್ಷ ಹಾಗೂ ಜಿಲ್ಲಾ ನಿರ್ದೇಶಕ ಗವಿಸಿದ್ದಯ್ಯ ಎಸ್. ಲಿಂಗಬಸಯ್ಯನಮಠ ಕಾರ್ಯಕ್ರಮದ ಅಧ್ಯಕ್ಷತೆವಹಿಸುತ್ತಾರೆ. ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ ರಾಯರೆಡ್ಡಿ. ಸಂಸದ ಕೆ. ರಾಜಶೇಖರ ಹಿಟ್ನಾಳ, ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ್, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ, ಮಾಜಿ ಶಾಸಕ ಬಸವರಾಜ ದಡೇಸುಗೂರ, ರಾಷ್ಟ್ರೀಯ ಸಂರಕ್ಷರು, ಸಹಕಾರ ಭಾರತಿ ರಮೇಶ ವೈದ್ಯ, ಬಿಜೆಪಿ. ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕೆ, ಕ.ರಾ.ಸೌ.ಸಂ.ಸ.ನಿ ಉಪಾಧ್ಯಕ್ಷ ಎ.ಆರ್.ಪ್ರಸನ್ನಕುಮಾರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಆರ್.ಕೆ.ಡಿ.ಸಿ.ಸಿ.ಬ್ಯಾಂಕ್, ರಾಯಚೂರ-ಕೊಪ್ಪಳ ಅಧ್ಯಕ್ಷ ವಿಶ್ವನಾಥ ಪಾಟೀಲ, ಸಹಕಾರ ಸಂಘಗಳ ಉಪನಿಬಂಧಕ ದಸ್ತಗೀರಿ ಅಲಿ ಸೇರಿದಂತೆ ಅನೇಕರು ಭಾಗವಹಿಸುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ರವಿಚಂದ್ರ ಬಡಿಗೇರ