ಗಣರಾಜ್ಯೋತ್ಸವ, 2023 ರ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳಿಗೆ ಆನ್‌ಲೈನ್ ಶಿಫಾರಸುಗಳು 2023 1ನೇ ಮೇ 2022 ರಂದು ಪ್ರಾರಂಭ ಮಾಡಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳಿಗೆ ಕೊನೆಯ ದಿನಾಂಕ 15 ಸೆಪ್ಟೆಂಬರ್ 2022ಯಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ಶಿಫಾರಸುಗಳು ರಾಷ್ಟ್ರೀಯ ಪುರಸ್ಕರ್ ಪೋರ್ಟಲ್ awards.gov.in ನಲ್ಲಿ ಮಾತ್ರ ಸ್ವೀಕರಿಸಲಾಗಿದೆ.
ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು 'ವಿಶಿಷ್ಟತೆಯ ಕೆಲಸವನ್ನು' ಗುರುತಿಸಲು ಪ್ರಯತ್ನಿಸುತ್ತದೆ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ/ಶಿಸ್ತುಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು/ಸೇವೆಗಾಗಿ ನೀಡಲಾಗುತ್ತದೆ.
ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿಎಸ್ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.
ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ" ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು/ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.
ನಾಮನಿರ್ದೇಶನಗಳು/ಶಿಫಾರಸುಗಳು ಮೇಲಿನ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ನಿರೂಪಣೆಯ ರೂಪದಲ್ಲಿ ಉಲ್ಲೇಖವನ್ನು ಒಳಗೊಂಡಂತೆ ಗರಿಷ್ಠ 800 ಪದಗಳಲ್ಲಿರ ಬೇಕು .
ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ mha.gov.in ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್‌ನಲ್ಲಿ padmaawards.gov.inಪ್ರಶಸ್ತಿಗಳು ಮತ್ತು ಪದಕಗಳು' ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ.
ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ವೆಬ್‌ಸೈಟ್‌ನಲ್ಲಿ padmaawards.gov.inಲಿಂಕ್‌ನೊಂದಿಗೆ ಲಭ್ಯವಿದೆ.