ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.