ಆಪಗೆ ಶಾಕಕೊಟ್ಟು ಬಿಜೆಪಿ ಸೇರತಾರಾ ಭಾಸ್ಕರ್ ರಾವ್ ?

  • Krishna Shinde
  • 14 Jan 2024 , 10:22 PM
  • Bengaluru
  • 318

ಬೆಂಗಳೂರು :ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಒಂದು ವರ್ಷದ ನಂತರ, ಬೆಂಗಳೂರು ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ.

ಇಂದು (Feb 28 ಮಂಗಳವಾರ )ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿದ ಭಾಸ್ಕರ್ ರಾವ್ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ಕರ್ನಾಟಕ ಉಸ್ತುವಾರಿ ಕೆ.ಅಣ್ಣಾಮಲೈ, ರಾಜ್ಯ ಸಚಿವ ಆರ್.ಅಶೋಕ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 ಭಾಸ್ಕರ್ ರಾವ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆಯೇ ಅಥವಾ ಇಲ್ಲ ಎಂಬುದನ್ನು ಬಿಜೆಪಿ ಇನ್ನೂ ಖಚಿತಪಡಿಸಿಲ್ಲ.

Read All News