ಗಂಗಾವತಿ: ತ್ವರಿತಗತಿಯಲ್ಲಿ ಕಾಲುವೆ ಕಾಮಗಾರಿ ಪೂರ್ಣಗೊಳಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಸೂಚಿಸಿದರು.
ಗಂಗಾವತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಪ್ರ ಗ್ರಾಮ ಬಳಿ ನಡೆಯುತ್ತಿರುವ ವಿಜಯನಗರ ಕಾಲುವೆಯ ಮೇಲ್ಮಟ್ಟ ಹಾಗೂ ಕೆಳಮಟ್ಟ ಕಾಮಗಾರಿ ವೀಕ್ಷಣೆ ಮಾಡಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ನಿಧಾನ ಗತಿಯಲ್ಲಿ ಕಾಮಗಾರಿ ನಡೆಯುತ್ತಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೇವಲ ಎರಡಮೂರು ತಿಂಗಳಲ್ಲಿ ಮುಗಿಯುವಂತಹ ಕೆಲಸವನ್ನು ಮೂರು ವರ್ಷಗಳಾದರೂ ಪೂರ್ಣಗೊಳಿಸದೆ ಇರುವುದರ ಗುತ್ತಿಗೆದಾರರ ನಿಧಾನಗತಿಯ ನಡೆಗೆ ಬೇಸರ ವ್ಯಕ್ತಪಡಿಸಿ ತ್ವರಿತ ಗತಿಯಲ್ಲಿ ಕೆಲಸ ಮುಗಿಸಿ ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ತಿಳಿಸಿದರು. ಅಷ್ಟೇ ಅಲ್ಲದೆ ಕಾಮಗಾರಿಗೆ ತೀವ್ರತೆ ನೀಡದಿದ್ದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ ಆರ್ ಶ್ರೀನಾಥ್, ಕರಿಯಣ್ಣ, ಸಂಗಟಿ ಕೆ ಆರ್ ಪಿ ಪಿ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ಯಮನೂರು ಚೌಡಕಿ ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು