ಯಶಸ್ವಿನಿ ಆರೋಗ್ಯ ಯೋಜನೆಗೆ ಹೆಸರು ನೋಂದಾಯಿಸಲು ಜ.31ಕೊನೆ ದಿನ

  • krishna s
  • 5 Jan 2025 , 2:51 AM
  • Bengaluru
  • 1131

ಬೆಂಗಳೂರು: ಯಶಸ್ವಿನಿ ಆರೋಗ್ಯ ಯೋಜನೆಗೆ ಹೆಸರು ನೋಂದಾಯಿಸಲು ಜ.31ರವರೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.ಹೆಸರು ನೋಂದಾಯಿಸಿಕೊಳ್ಳುವವರಿಗೆ 2024 ಏ.1ರಿಂದ 2026ರ ಮಾರ್ಚ್ 31ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ ಎಂದು ಸಹಕಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಹಕಾರ ಇಲಾಖೆ ನಿಗದಿಪಡಿಸಿದ ಹಣ ಪಾವತಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಾಯಿಸಿಕೊAಡವರಿಗೆ ಇಲಾಖೆ ಸ್ಮಾರ್ಟ್ಕಾರ್ಡ್ ನೀಡುತ್ತದೆ. ಇದರ ಆಧಾರದ ಮೇಲೆ ಯೋಜನೆಗೆ ಒಳಪಡುವ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತçಚಿಕಿತ್ಸೆ ದೊರೆಯಲಿದೆ.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂದಿಸಿದ  ರೋಗಗಳು, ಕಿವಿ, ಮೂಗು, ಗಂಟಲು ಬೇನೆ, ಕರುಳಿನ ಖಾಯಿಲೆಗಳು, ನರ, ಕಣ್ಣು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂದಿಸಿದ  ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯ ಇದೆ.

Read All News