ಜಾರಕಿಹೊಳಿ-ಹೆಬ್ಬಾಳ್ಕರ್ ಕೋಲ್ಡ್ ವಾರ್ : ಏನಂತಾರೆ ಜಾರಕಿಹೊಳಿ ..?

  • Krishna Shinde
  • 15 Jan 2024 , 2:20 AM
  • Belagavi
  • 436

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲರಿಗೂ ಸೂಚನೆ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನಿಮ್ಮ ನಡುವೆ ಅಧಿಕಾರಿಗಳ ವರ್ಗಾವಣೆಯಲ್ಲಿ ಕೋಲ್ಡ್ ವಾರ್ ನಡೆಯುತ್ತಿರುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಲ್ಲ ಆ ಸೀಟು ರಾಜು ಸೇಠ್ ಅವರಿಗೆ ಬಿಟ್ಟಿದ್ದು. 

ನಮಗೂ ಲಕ್ಷ್ಮೀ ಅವರಿಗೂ ಸಂಬಂಧ ಇಲ್ಲ. ಅವರವರ ಕ್ಷೇತ್ರದದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಅವರು‌ ಮೂರು ಪತ್ರ ಮೊದಲು ಕೊಟ್ಟಿರುತ್ತಾರೆ. ಅವರದ್ದು ಕೆಲಸ ಆಗುತ್ತದೆ. ಅಲ್ಲಿ ಆಗದಿದ್ದರೆ ನಮ್ಮ ಕಡೆ ಪತ್ರ ತೆಗೆದುಕೊಂಡು‌ ಹೋಗುತ್ತಾರೆ. ಇದಕ್ಕೂ ನಮ್ಮಿಬ್ಬರ ನಡುವೆ ಕೋಲ್ಡ್ ವಾರ ಇದೆ ಎನ್ನುವುದಕ್ಕೂ ಸರಿಯಲ್ಲ ಎಂದರು.

Read All News