ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮಹಾ ಸಿಎಂ

  • 15 Jan 2024 , 2:29 AM
  • Mahashtra
  • 234

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ಬೆಳಗಾವಿ, ಕಾರವಾರ, ನಿಪ್ಪಾಣಿ , ಭಾಲ್ಕಿ, ಬೀದರ್ ನಗರಗಳು ಮತ್ತು ಕರ್ನಾಟಕದ 865 ಮರಾಠಿ ಭಾಷಿಕ ಗ್ರಾಮಗಳನ್ನು ಮಹಾರಾಷ್ಟ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಸೇರಿಸಲು ಸುಪ್ರೀಂ ಕೋರ್ಟ್‌ನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಮಂಡಿಸಿದ ನಿರ್ಣಯವನ್ನು ಓದಿದರು.

ಕೇಂದ್ರ ಗೃಹ ಸಚಿವರ ಜತೆಗಿನ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಒತ್ತಾಯಿಸಬೇಕು ಮತ್ತು ಗಡಿ ಭಾಗದ ಮರಾಠಿ ಜನರ ಸುರಕ್ಷತೆಗೆ ಸರ್ಕಾರಕ್ಕೆ ತಿಳುವಳಿಕೆ ನೀಡಬೇಕು ಎಂದು ಸಿಎಂ ನಿರ್ಣಯವನ್ನು ಮಂಡಿಸಿದ್ದಾರೆ.

ಕರ್ನಾಟಕ -ಮಹಾರಾಷ್ಟ್ರಗಡಿ ಸಮಸ್ಯೆ ಮಹಾರಾಷ್ಟ್ರ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ ಎಂದು ANI ಟ್ವೀಟ್ ಮೂಲಕ ತಿಳಿಸಿದೆ.

Read All News