ಕರ್ನಾಟಕ ಸ್ಲೀಪರ್ ಸೆಲ್ ಆಗುತ್ತುದೆಯಾ ಎಂಬುದರ ಕುರಿತು ಇಂದು ಗೃಹ ಸಚಿವರ ಮಹತ್ವದ ಸಭೆ ನಡೆಯಲಿ: ಶಾಸಕ ರಾಜೀವ
15 Jan 2024 , 12:17 AM
Belagavi
118
ಬೆಳಗಾವಿ: ಭಯೋತ್ಪಾದಕರಿಗೆ ಕರ್ನಾಟಕ ಸ್ಲೀಪರ್ ಸೆಲ್ ಆಗುತ್ತಿದೆಯಾ ಇದನ್ನು ತಡೆಗಟ್ಟುವುದು ಹೇಗೆ ಎಂದು ಗೃಹ ಸಚಿವರು ಉನ್ನತ ಮಟ್ಟದ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಕುಡುಚಿ ಶಾಸಕ ಪಿ.ರಾಜೀವ ಹೇಳಿದರು.
ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮಂಗಳೂರಿನಲ್ಲಿ ನಡೆದ ಕುಕ್ಕರ ಬ್ಲಾಷ್ಟ್ ಪ್ರಕರಣದಲ್ಲಿ ಶಾರಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಸಂಗ್ರಹಿಸಿ ಗೃಹ ಸಚಿವ ಆರಗ್ ಜ್ಞಾನೇಂದ್ರ ಭೇಟಿ ನೀಡಿ ಸಭೆ ನಡೆಸಲಿದ್ದಾರೆ. ಉಗ್ರವಾದ ಕಡಿವಾಣ ಹಾಕಲು ಭಾರತ ಸರಕಾರ ಸನ್ನದ್ದವಾಗಿದೆ ಎಂದರು.