ಬೆಳಗಾವಿ : ಸಾರ್ವಜನಿಕರ ಕೆಲಸ, ಕಾರ್ಯಗಳು ವಿಳಂಬ ಆಗುತ್ತಿವೆ ಎಂದು ದೂರುಗಳ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಮಹಾನಗರ ಪಾಲಿಕೆಗೆ ದಿಡೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ 10ಕ್ಕೂ ಹೆಚ್ಚಿನ ಸಿಬ್ಬಂದಿ ಪಾಲಿಕೆ ಮೇಲೆ ದಾಳಿ ನಡೆಸಿ,
ಜನನ-ಮರಣ ಪ್ರಮಾಣ ಪತ್ರ ವಿತರಣೆ ಕೇಂದ್ರ, ತೆರಿಗೆ ಪಾವತಿ ಕೇಂದ್ರ, ಪರಿಸರ, ಆರೋಗ್ಯ, ಶಿಕ್ಷಣ, ಇಂಜಿನಿಯರಿಂಗ್ ವಿಭಾಗಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿ, ದಾಖಲೆ ಸಂಗ್ರಹಿಸಿದ್ದಾರೆ.