ಬೆಳಗಾವಿ: ಬೆಳಗಾವಿಯಲ್ಲಿ ಇದೇ ಮಾ.7 ರಿಂದ ಐದು ದಿನಗಳ ಕಾಲ ನಡೆಯಲಿರುವ ಕೃಷಿ ಉತ್ಸವದ ಬೃಹತ್ ಪೆಂಡಾಲ್ ಭೂಮಿ ಪೂಜೆಯನ್ನು ಬುಧವಾರ ಇಲ್ಲಿನ ಸಿಪಿಎಡ್ ಮೈದಾನದಲ್ಲಿ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ಅಧ್ಯಕ್ಷ ಮಂಜುನಾಥ ಅಳವಣಿ ನೆರವವೆರಿಸಿದರು.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ಸಹಯೋಗದಲ್ಲಿ ಮಾ.7 ರಿಂದ 11ರ ವರೆಗೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೃಷಿ ಉತ್ಸವ ಜರಗಲಿದೆ. ಈ ಹಿನ್ನೆಲೆಯಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ನಿದೇರ್ಶಕ ಶಿವನಗೌಡಾ ಪಾಟೀಲ, ಶಕೀಲ್ ಸೇರಿದಂತೆ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ನ ಸದಸ್ಯರು ಉಪಸ್ಥಿತರಿದ್ದರು.