ಅಥಣಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಅಕ್ರಮ ಮರಳುಗಾರಿಕೆ ಮೇಲೆ ದಾಳಿ

  • Krishna Shinde
  • 11 Jan 2024 , 8:49 PM
  • Bengaluru
  • 412

ಅಥಣಿ :ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವವರ ಮೇಲೆ ಹಠಾತ್ತನೆ ದಾಳಿ ನಡೆಸಿದ ಅಥಣಿ ಪೊಲೀಸರು 25 ಟ್ರ್ಯಾಕ್ಟರ್ ,4 ಜೆಸಿಬಿ 1 ಹೈವಾ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿದ್ದು ಪೊಲೀಸರು  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಡಿವೈಎಸ್ಪಿ ಶ್ರೀಪಾದ ಜಲ್ದೇ ನೇತೃತ್ವದಲ್ಲಿ ದಾಳಿ ನಡೆದಿದ್ದು 3 ಜನ ಪಿಎಸ್ಐ ಒರ್ವ ಸಿಪಿಪಿ 20ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read All News