ಬೆಳಗಾವಿ : ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಹೇಳಿದರು.
ರೈತರು ಬೆಳೆದ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾದ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿಯುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಒಟ್ಟು 27 ಸಕ್ಕರೆ ಕಾರ್ಖಾನೆಗಳು ಇವೆ. ಆದರೆ ಸಕ್ಕರೆ ಆಯುಕ್ತರಿಗೆ ಮಾಹಿತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ವರ್ಷದ ಎಂ.ಕೆ. ಹುಬ್ಬಳ್ಳಿಯ ಸಕ್ಕರೆ ಕಾರ್ಖಾನೆಯ ಕಬ್ಬಿನ ಬಾಕಿ ಬಿಲ್ ಸುಮಾರು 3 ಕೋಟಿ. ರೂ. ಬಾಕಿ ಇದೆ. ಅದನ್ನು ಕೊಡಿಸಬೇಕು. ಕಳೆದ ಬಾರಿಯೂ ಎಫ್‌ಆರ್‌ಪಿ ದರ ನಿಗದಿ ಪಡಿಸಿದಂತೆಯೇ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು. ಪ್ರಕಾಶ ನಾಯಕ, ರಾಘವೇಂದ್ರ, ಕಲ್ಲಪ್ಪ ಮೊದಲಾದವರು ಹಾಜರಿದ್ದರು.