ಕೇಂದ್ರದ ವಿರುದ್ದ ಸಿಡಿದೆದ್ದ ಸಚಿವ ಸತೀಶ್ ಜಾರಕಿಹೊಳಿ

  • shivaraj bandigi
  • 7 Feb 2024 , 12:42 PM
  • Belagavi
  • 753

ದೆಹಲಿ: ಬರ ಪರಿಹಾರ ನಿಧಿಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೂರು ಬಾರಿ ದೆಹಲಿಗೆ ಬಂದಿದ್ದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಬಂದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಆದರೆ ಇದುವರೆಗೆ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ, ಅನುದಾನ ಬಿಡುಗಡೆಗೆ ಯಾವ ಮಾರ್ಗಸೂಚಿಗಳಿವಿಯೋ ಅವುಗಳನ್ನು ಆಧರಿಸಿ ನಮ್ಮ ಪಾಲು ನಮಗೆ ನೀಡಲಿ ಎಂದು ಜಾರಕಿಹೊಳಿ ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಧರಣಿ ಪಾಲ್ಗೊಂಡು ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯ ಸರಕಾರಗಳು ಕೇಂದ್ರದ ನೀತಿಗಳ ವಿರುದ್ಧ ದೆಹಲಿಗೆ ಬಂದು ಸತ್ಯಾಗ್ರಹ ನಡೆಸುವುದು ಇದು ಮೊದಲ ಸಲವೇನಲ್ಲ, ಹಿಂದೆ ಬೇರೆ ಬೇರೆ ರಾಜ್ಯಗಳು ಹೀಗೆ ಮಾಡಿವೆ ಎಂದು ಹೇಳಿದರು.

ತಮ್ಮ ಸರ್ಕಾರ ಯಾವುದೋ ಲೋಕಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ಪ್ರತಿಭಟನೆ ಮಾಡುತ್ತಿಲ್ಲ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ, ಅಂಕಿ-ಅಂಶಗಳನ್ನು ಜೊತೆಗಿಟ್ಟುಕೊಂಡು ಇಲ್ಲಿಗೆ ಬಂದಿದ್ದೇವೆ, ಹಣಕಾಸು ಅಯೋಗದ ಶಿಫಾರಸ್ಸಿನ ಮೇಲೆ ಅನುದಾನ ಹಂಚಿಕೆ ಮಾಡಲಾಗಿದೆ ಅಂತ ಹಣಕಾಸು ಸಚಿವೆ ಹೇಳುತ್ತಾರೆ, ಆದರೆ ದಾಖಲೆಗಳನ್ನು ನೋಡಿದರೆ ರಾಜ್ಯಕ್ಕೆ ಕಡಿಮೆ ಅನುದಾನ ಸಿಕ್ಕಿರುವುದು ಗೊತ್ತಾಗುತ್ತದೆ ಎಂದರು.

ಬರ ಪರಿಹಾರ ನಿಧಿಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೂರು ಬಾರಿ ದೆಹಲಿಗೆ ಬಂದಿದ್ದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಬಂದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಆದರೆ ಇದುವರೆಗೆ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ, ಅನುದಾನ ಬಿಡುಗಡೆಗೆ ಯಾವ ಮಾರ್ಗಸೂಚಿಗಳಿವಿಯೋ ಅವುಗಳನ್ನು ಆಧರಿಸಿ ನಮ್ಮ ಪಾಲು ನಮಗೆ ನೀಡಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Read All News