ಬೆಳಗಾವಿ:ಬೆಳಗಾವಿ ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಆಯೋಜಿಸಲಾದ ಕ್ರಿಕೆಟ್ ಪಂದ್ಯಾವಳಿ ಇಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮೈದಾನದಲ್ಲಿ ಉದ್ಘಾಟನೆಯಾಯಿತು.
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಶೀಫ್ ರಾಜು ಸೇಠ್ ಟ್ರೋಫಿ ಅನಾವರಣ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪೋಲಿಸ್ ಆಯುಕ್ತ ಸಿದ್ದರಾಮಪ್ಪ, ಎಸ್ಪಿ ಭೀಮಾಶಂಕರ ಗುಳೇದ, ಡಿಸಿಪಿ ರೋಹನ ಜಗದೀಶ್, ಡಾ. ಗಿರೀಶ ಸೋನವಾಲ್ಕರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪುಂಡಲಿಕ ಬಾಳೋಜಿ, ಕೆಯುಡಬ್ಲೂಜೆ ಜಿಲ್ಲಾ ಅಧ್ಯಕ್ಷ ದಿಲೀಪ್ ಕುರಂದವಾಡೆ, ರಾಜಶೇಖರ್ ಪಾಟೀಲ, ಸಚಿವರ ಆಪ್ತರಾದ ಮಲಗೌಡ ಪಾಟೀಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.