ಬೆಳಗಾವಿ: ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಬೆಳಗಾವಿಯ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಆಶ್ರಯದಲ್ಲಿ, ಪಂಚಮಸಾಲಿ ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಸಮಾಜದ ಎಲ್ಲ ಒಳಪಂಗಡಗಳನ್ನು ಓಬಿಸಿ ಮೀಸಲಾತಿಗೆ ಒಳಪಡಿಸುವ ಕುರಿತು ಮಾತನಾಡಿದರು.