ಚಿಕ್ಕೋಡಿ- ಕೃಷ್ಣಾ ನದಿಯಿಂದ ಜನರ ಜೀವನ ಅಸ್ತವ್ಯಸ್ತಗೊಂಡು ನಡುಗಡ್ಡೆಯಿಂದ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಆಗಿದ್ದ ಗ್ರಾಮಸ್ಥರು ಇರುವ ಕಾಳಜಿ ಕೇಂದ್ರ ಅಥಣಿ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿರುವ ಕಾಳಜಿ ಕೇಂದ್ರಕ್ಕೆ ಅಥಣಿ ತಾಲೂಕಾಧಿಕಾರಿಗಳ ಜೊತೆ ಭೇಟಿ ಮಾಡಿ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು.
ನೆರೆ ಸಂತ್ರಸ್ತರ ಜಾನುವಾರುಗಳಿಗೆ ಮೇವು ವಿತರಿಸಿ, ಹಣದ ಸಹಾಯ ಮಾಡಿ, ಯಾರು ಸಹ ಭಯಪಡುವ ಅವಶ್ಯಕತೆ ಇಲ್ಲ. ಎಲ್ಲಾ ಹಳ್ಳಿಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈಗಾಗಲೇ ತಾಲೂಕಾಡಳಿತ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಭರವಸೆ ನೀಡಿದರು. .