ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಸಿಎಂ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳನ್ನು ಸಜ್ಜುಗೊಳಿಸುವಂತೆ ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಕೇಳಿಕೊಂಡಿದ್ದಾರೆ.
ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬದವರಿಗೆ PMNRF ನಿಂದ 2 ಲಕ್ಷ ರೂ ಪರಿಹಾರ ಹಾಗು ಗಾಯಾಳುಗಳಿಗೆ ರೂ. 50,000 ಪರಿಹಾರ ಘೋಷಿಸಿದ್ದಾರೆ.