ಬೆಳಗಾವಿ : ಮಹಾನಗರ, ಗ್ರಾಮಾಂತರ ಬಿಜೆಪಿ ಘಟಕದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆಯ ಪ್ರತಿಭಟನಾ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು, ದಾರಿಯುದ್ದಕ್ಕೂ ರಾಜ್ಯಪಾಲರ ವಿರುದ್ಧ ಅಸಭ್ಯ ಪದ ಬಳಸಿದ ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶದ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಪಟ್ಟು ಹಿಡಿದಿರುವ ಪ್ರತಿಭಟನಾಕಾರರು, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಭಿತ್ತಿ ಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿದ ಕೈ ನಾಯಕರಾದ ಸಚಿವರಾದ ಕೃಷ್ಣ ಭೈರೆಗೌಡ, ಜಮೀರ್ ಅಹ್ಮದ್ ಖಾನ್, ಶಾಸಕ ಐವಾನ್ ಡಿಸೋಜಾ ಫೋಟೊ ಪ್ರದರ್ಶಿಸಿ ಅಸಮಾಧಾನ ಹೊರಹಾಕಿದರು.