ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ : ಲಕ್ಷ್ಮಣ ಸವದಿ

  • Krishna Shinde
  • 14 Jan 2024 , 6:27 PM
  • Belagavi
  • 263

ಅಥಣಿ : ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಇದರಿಂದ ನಾನು ಮಾ.27ರಂದು ಎಲ್ಲ ಸಮುದಾಯದವರ ಒಪ್ಪಿಗೆ ಪಡೆದು ಒಂದು ತೀರ್ಮಾನಕ್ಕೆ ಬರುತ್ತಿದ್ದೇನೆ. ನೀವು ಯಾವತ್ತೂ ನನ್ನ ಬೆಂಬಲವಾಗಿ ನಿಲ್ಲಿ ಎಂದು ಮುಸ್ಲಿಂ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮನವಿ ಮಾಡಿದರು.

ಅವರು ಅಥಣಿ ಪಟ್ಟಣದ ನೂರಾಣಿ ಹಾಲ್ ನಲ್ಲಿ ಮುಸ್ಲಿಂ ಸಮುದಾಯದ ಭವನದಲ್ಲಿ ಮುಸ್ಲಿಂ ಮುಖಂಡರ ಸಭೆ ಕರೆದು ಮಾಧ್ಯಮದವರ ಜೊತೆ ಮಾತನಾಡುತ್ತಾ ನಾನು ಮನೆಯಲ್ಲಿ ಸುಮನೆ ಕುಳಿತಿದ್ದೆ. ಆದರೆ, ಕೆಲವರು ನನ್ನನ್ನು ಕೂರಲು ಬಿಡುತ್ತಿಲ್ಲ. ಹಾಗಾಗಿ ನಾನು ನಿಮ್ಮ ಮುಂದೆ ಬಂದಿದ್ದೇನೆ ನಿಮ್ಮ ಅಭಿಪ್ರಾಯ ನನಗೆ ಮುಖ್ಯ. ನನಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ ಬರುವ 27ರ ಒಳಗಾಗಿ ತಾಲೂಕಿನ ಎಲ್ಲ ಸಮುದಾಯದ ಮುಖಂಡರ ಸಭೆ ಕರೆಯುತ್ತೇನೆ. ಅವರು ಅಥಣಿಯಿಂದ ಚುಣಾವಣೆ ಸ್ಪರ್ಧೆ ಮಾಡು ಎಂದರೆ ನಾನು ಪಕ್ಷದಲ್ಲಿ ಟಿಕೆಟ್ ಕೇಳುತ್ತೇನೆ ಎಂದರು.

ಜನರು ಟಿಕೆಟ್ ಕೇಳು ಎಂದರೆ ನಾನು ಬಿ ಫಾರಂ ಕೇಳುತ್ತೇನೆ. ಪಕ್ಷದ ವರಿಷ್ಠರು ಬೇಡ ಎಂದರೆ ನಾನು ಅವರ ಮಾರ್ಗದಲ್ಲಿ ನಡೆಯುತ್ತೇನೆ. ಅಥಣಿ ತಾಲೂಕಿನ ಮುಸ್ಲಿಂ ಸಮುದಾಯ ನನ್ನ ಹೃದಯದಲ್ಲಿ ಅಚ್ಚೊತ್ತಿದೆ. ಎಲ್ಲಾ ಸಮುದಾಯದ ಒಪ್ಪಿಗೆ ಪಡೆದುಕೊಂಡು ಪಕ್ಷಕ್ಕೆ ತಿಳಿಸುತ್ತೇನೆ. ನೂರಕ್ಕೆ ನೂರರಷ್ಟು ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ" ಎಂದು ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.

ಹಲವರು ನೀವು ಚುನಾವಣೆಗೆ ನಿಲ್ಲುತ್ತಿರಾ? ಎಂದು ಹಲವರು ಕೇಳುತ್ತಿದ್ದಾರೆ. ಆದರೆ, ಈ ವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ನನಗೆ ಟಿಕೆಟ್ ಬೇಕು ಎಂದು ಅರ್ಜಿ ಹಾಕಿಲ್ಲ. ನಾಲ್ಕೈದು ಸಮುದಾಯದ ಜನರು ಅಭಿಪ್ರಾಯ ಪಡೆದುಕೊಂಡು ಅವರು ಯಾವ ತಿರ್ಮಾನ ಮಾಡುತ್ತಾರೆ. ಅದಕ್ಕೆ ನಾನು ಬದ್ಧನಾಗಿದ್ದೇನೆ. ಅವರು ಚುಣಾವಣೆಗೆ ನಿಲ್ಲು ಎಂದರೆ ನಾನು ಪಕ್ಷಕ್ಕೆ ಟಿಕೆಟ್ ನೀಡುವಂತೆ ಅರ್ಜಿ ಹಾಕುತ್ತೇನೆ. ಮಾ.27 ರಂದು ನಾನು ಚುನಾವಣೆಗೆ ನಿಲ್ಲುವ ಬಗ್ಗೆ ನಿರ್ಣಯ ಮಾಡುತ್ತೇನೆ ಎಂದರು.

ವರದಿ ಕಲ್ಲಪ್ಪ ಕನಾಳ ಅಥಣಿ

Read All News