ದ್ವಿತೀಯ ಪಿಯು ಮುಖ್ಯ ಪರೀಕ್ಷೆಯಲ್ಲಿ ಹೊಸ ನಿಯಮ ತರಲು ನಿರ್ಧರಿಸಿದ ರಾಜ್ಯ ಸರ್ಕಾರ: ಇಲ್ಲಿದೆ ಮಾಹಿತಿ

  • 14 Jan 2024 , 11:37 PM
  • Bengaluru
  • 219

ಬೆಂಗಳೂರು :ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಲೋಕಲವಿವ ನ್ಯೂಸ್ ವರದಿಗಾರರಾಗಲು 8310635736 ಕರೆಮಾಡಿ

2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ ಎಂದು ಬಿಸಿ ನಾಗೇಶ ತಿಳಿಸಿದ್ದಾರೆ.

ಲೋಕಲವಿವ ನ್ಯೂಸನಲ್ಲಿ ಜಾಹಿರಾತುಗಳಿಗಾಗಿ 8904752259 ಕರೆಮಾಡಿ

ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ. 

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಮ ನಲ್ಲಿ ಫಾಲೋ ಮಾಡಲು ಈ ಲಿಂಕ್ ಬಳಿಸಿ ಇನ್ಸ್ಟಾಗ್ರಾಮ್

ಫೇಸ್ಬುಕ ನಲ್ಲಿ ಫಾಲೋ ಮಾಡಲು ಈ ಲಿಂಕ್ ಬಳಿಸಿಫೇಸ್ಬುಕ್

youtubeನಲ್ಲಿ ಸಬ್ಸಕ್ರೈಬ್ ಮಾಡಲು ಈ ಲಿಂಕ್ ಬಳಿಸಿyoutube

Read All News