ಬೆಂಗಳೂರು :ಗೃಹ ಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ,ಕಾಂಗ್ರೆಸ್ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ,ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್ ಬಿಲ್ ಬರುವುದಿಲ್ಲ,ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು,ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.