ಬೆಳಗಾವಿ :
ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಮೀಪದ ಸುವರ್ಣ ಗಾರ್ಡನ್ ಬಳಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿರುವ ಸೆಕ್ರೆಟರಿ ಮಟ್ಟದ ಕಚೇರಿಯನ್ನು ಸ್ಥಳಾಂತರ ಮಾಡಬೇಕು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಪ್ರಾಧಿಕಾರ ರಚನೆ ಮಾಡಿದ ಹಾಗೆ ಕಿತ್ತೂರು ಕರ್ನಾಟಕ ಪ್ರಾಧಿಕಾರ ರಚನೆ ಮಾಡಬೇಕೆಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳಿಗೆ ಸಮಾನ ರಾಜಕೀಯ ಪ್ರಾತಿನಿಧ್ಯ ಸಿಗಬೇಕು. ಈ ಭಾಗದ ಜನರ ಸಮಸ್ಯೆಗಳ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿ ಸದನದಲ್ಲಿ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದರು.
ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ, ಭೀಮಪ್ಪ ಗಡಾದ, ನಾಗೇಶ ಗೋಲಶೆಟ್ಟಿ, ಅನ್ನಪೂರ್ಣ ನಿರ್ವಾಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.