ದೆಹಲಿ :ಮೇ 28 ರಂದು ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಅಲ್ಲ, ಭಾರತದ ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಕಾಂಗ್ರೆಸ್, ಟಿಎಂಸಿ, ಎಸ್‌ಪಿ ಮತ್ತು ಎಎಪಿ ಸೇರಿದಂತೆ 19 ವಿರೋದ ಪಕ್ಷಗಳು ಬುಧವಾರ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿವೆ.