ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನ ಮೊದಲು ಜೈಲಿಗೆ ಹಾಕಿ :ಸಿದ್ದರಾಮಯ್ಯ

  • 15 Jan 2024 , 12:38 AM
  • Bengaluru
  • 196

ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ ಎಂದು ಸಿದ್ದು ಪ್ರಶ್ನಿಸಿದ್ದಾರೆ .

ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ .

ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಸಿದ್ದರಾಮಯ್ಯ ಎಂದು ಗುಡುಗಿದ್ದಾರೆ .

Read All News