ಬೆಳಗಾವಿ: ಹಾಸನದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿರುವ ಪ್ರಕರಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿದಿದ್ದರೂ ಹಾಸನ ಟಿಕೆಟ್ ನೀಡಿದ್ದು ದುರ್ದೈವದ ಸಂಗತಿ ಎಂದು ಎಐಸಿಸಿ ರಾಷ್ಟ್ರೀಯ ಕಾಂಗ್ರೆಸ್ ವಕ್ತಾರೆ ಸುಪ್ರೀಯಾ ಶ್ರೀನೆಟ್ ವಾಗ್ದಾಳಿ ನಡೆಸಿದ್ದಾರೆ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರಿನಲ್ಲಿ ಬಿಜೆಪಿ ನಡೆಸಿದ ಸಮಾವೇಶದಲ್ಲಿ ಪ್ರಜ್ವಲ್ ರೇವಣ್ಣನ ಬೆನ್ನು ತಟ್ಟಿ ಮತ ನೀಡುವಂತೆ ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಮಾಡಿರುವವರ ಪರವಾಗಿ ನಿಲ್ಲುತ್ತಾರೆ. ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಪ್ರಜ್ವಲ್ ರೇವಣ್ಣನ ಪ್ರಕರಣದ ಕುರಿತು ಯಾವ ಕೇಂದ್ರ ಸಚಿವರು ಮಾತನಾಡದೆ ಇರುವುದು ವಿಪರ್ಯಾಸದ ಸಂಗತಿ ಎಂದು ಸುಪ್ರೀಯಾ ಶ್ರೀನೆಟ್ ವಾಗ್ದಾಳಿ ನಡೆಸಿದ್ದಾರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.