ರಾಜ್ಯಪಾಲರದಿಂದ ಒಪ್ಪಿಗೆ ಪಡೆದ 14 ವಿಧೇಯಕಗಳ ಪಟ್ಟಿ ಮಂಡನೆ

  • 15 Jan 2024 , 1:35 AM
  • Belagavi
  • 141

ಬೆಳಗಾವಿ : ಡಿ.20: ರಾಜ್ಯಪಾಲರದಿಂದ ಒಪ್ಪಿಗೆ ಪಡೆದ 14 ವಿಧೇಯಕಗಳ ಪಟ್ಟಿಯನ್ನು ವಿಧಾನ ಪರಿಷತ್‌ಲ್ಲಿ ಮಂಗಳವಾರ ಮಂಡಿಸಲಾಯಿತು. ಕರ್ನಾಟಕ ಧಾರ್ಮಿಕ ಸ್ವಾತಂತ್ರö್ಯ ಹಕ್ಕು ಸಂರಕ್ಷಣಾ ವಿಧೇಯಕ -2022,

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ, ಸಂರಕ್ಷಣೆ (ತಿದ್ದುಪಡಿ) ವಿಧೇಯಕ-2022,

ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ-2022,

ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022,

ಕರ್ನಾಟಕ ರೇಷ್ಮೆ ಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು,ವಿತರಣೆ ಮತ್ತು ಮಾರಾಟ ವಿನಿಮಯ ತಿದ್ದುಪಡಿ)

ವಿಧೇಯಕ-2022, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಸರುಕು ಮತ್ತು ಸೇವೆಗಳ ತೆರಿಗೆ(ತಿದ್ದುಪಡಿ)

ವಿಧೇಯಕ-2022, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ -2022, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ-2022,

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಸ್ಟಾಂಪ್ (ಮೂರನೇ ತಿದ್ದುಪಡಿ) ವಿಧೇಯಕ -2022, ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ವಿಧೇಯಕ -2022, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಮ (ತಿದ್ದುಪಡಿ) ವಿಧೇಯಕ-2022 ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಅನುಸೂಚಿತ ಜಾತಿ ಮತ್ತು ಅನಸೂಚಿತ ಪಂಗಡಗಳ ಕಲ್ಯಾಣ ಸಮತಿಯ ಅಧ್ಯಕ್ಷ ಮಂಜುನಾಥ್ ಭಂಡಾರಿ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ 2021-22ನೇ ಸಾಲಿನ 6ನೇ ವರದಿಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಲಾಯಿತು.

Read All News