ಇಂದು ಕೊಪ್ಪಳದಲ್ಲಿ ಪತ್ರಿಕಾ ದಿನಾಚರಣೆ , ಪುರಸ್ಕಾರ ಹಾಗೂ ಬಹುಮಾನ ವಿತರಣೆ

  • shivaraj B
  • 14 Sep 2024 , 11:21 AM
  • Koppal
  • 398

ಕೊಪ್ಪಳ  :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ದಿ.14 ರ ಶನಿವಾರ ಬೆಳಗ್ಗೆ 10.30 ಗಂಟೆಗೆ ಇಲ್ಲಿನ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ವಿಜೇತ ಕ್ರೀಡಾಪಟು ಪತ್ರಕರ್ತರಿಗೆ ಬಹುಮಾನ ವಿತರಣೆ ಸಮಾರಂಭ ಜರುಗಲಿದೆ 

ಸಂಸದ ಕೆ ರಾಜಶೇಖರ್ ಹಿಟ್ನಾಳ್ ಪತ್ರಿಕಾ ದಿನಾಚರಣೆಯ ಉದ್ಘಾಟನೆ ನೆರವೇರಿಸಲಿದ್ದು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ್ ತಗಡೂರು ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡು ಆಶಯ ಭಾಷಣ ಮಾಡಲಿದ್ದಾರೆ, ಶಾಸಕ ಕೆ, ರಾಘವೇಂದ್ರ ಹಿಟ್ನಾಳ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಮಾಜಿ ಸಂಸದ ಸಂಗಣ್ಣ ಕರಡಿ ,ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಉಪಾಧ್ಯಕ್ಷೇ ಅಶ್ವಿನಿ ಗದುಗಿನ ಮಠ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ

ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ಗುಡ್ಲಾನೂರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಸಿ ಲೋಕೇಶ್ ರಾಜ್ಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸೋಮಶೇಖರ್ ಕೆರಗೋಡು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ ನಿಗಜ್ಜ ಅತಿಥಿಗಳಾಗಿ ಪಾಲ್ಗೊಂಡು ವಿಜೇತ ಕ್ರೀಡಾಪಟು ಪತ್ರಕರ್ತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನುಸ್ವಾಗತಿಸಿದ್ದಾರೆ.

ವರದಿ : ರವಿಚಂದ್ರ   ಬಡಿಗೇರ 

Read All News