ಬೆಳಗಾವಿ : ಬೆಂಗಳೂರಿನ ಜಯನಗರದಲ್ಲಿರುವ ಜೈನ್ ಕಾಲೇಜಿನಲ್ಲಿ ನಡೆದ ಯೂತ್ ಫೆಸ್ಟ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಲಾಗಿದ್ದು, ಅವಹೇಳನ ಮಾಡಿರುವ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆ ಒತ್ತಾಯಿಸಿದೆ.
ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಕಾಲೇಜಿನಲ್ಲಿ ಫೆ.6ರಂದು ಕಾಲೇಜು ಫೆಸ್ಟ್ ನಡೆಸಲಾಗಿತ್ತು. ನಗರದ ನಿಮಾನ್ಸ್ ಕನ್ವೆಸ್ಟನ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಾತಿ ವ್ಯವಸ್ಥೆಯನ್ನು ಖಂಡಿಸುವ ಸಂದೇಶವನ್ನು ಕೊಡುವ ಭರದಲ್ಲಿ ವಿದ್ಯಾರ್ಥಿಗಳು ಯಡವಟ್ಟು ಮಾಡಿಕೊಂಡಿದ್ದಾರೆ. ಕಾಲೇಜು ಫೆಸ್ಟ್‌ನಲ್ಲಿ ಹಾಸ್ಯ ಜತೆಗೆ ದಲಿತರನ್ನು ಗೇಲಿ ಮಾಡಿದ್ದನ್ನು ಖಂಡಿಸುತ್ತೇವೆಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಡಾ. ಬಿ.ಆರ್. ಅಂಬೇಡ್ಕರ್ ಅಲ್ಲ. ಅವರು 'ಬಿಯರ್ ಅಂಬೇಡ್ಕರ್' ಎಂದು ಅವಹೇಳನ ಮಾಡಿದ್ದಾರೆ. ಸ್ಕಿಟ್ ನಲ್ಲಿ ದಲಿತ ಯುವತಿ ಬಗ್ಗೆಯೂ ಅವಮಾನ ಮಾಡಿದ್ದು, 'ಡೋಂಟ್ ಟಚ್ ಮಿ, ಟಚ್ ಮಿ' ಎಂಬ ಹಾಡನ್ನು ಹಾಕಿ ಗೇಲಿ ಮಾಡಿದ್ದಾರೆ. 'ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು' ಎಂದು ವಿವಾದಾತ್ಮಕವಾಗಿ ನುಡಿದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ದಲಿತ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಘಟನೆಯ ಬಗ್ಗೆ ಮಹಾರಾಷ್ಟ್ರದಲ್ಲಿ ದಲಿತ ಸಂಘಟನೆಯ ಮುಖಂಡ ಅಕ್ಷಯ್ ಬನ್ನೊಡೆ ಎಂಬುವವರು ನಾಂದೇಡ್ ಅವರು ಕೂಡಾ (ಮಹಾರಾಷ್ಟ್ರ) ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳಿಗೆ ದೂರು ನೀಡಿದ್ದಾರೆ.
ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿರುವರ ವಿರುದ್ಧ ಎಸ್‌ಸಿ ಸೆಕ್ಷನ್ 3ರ ಅಡಿಯಲ್ಲಿ ಹಾಗೂ ಎಸ್ಟಿ ಕಾಯ್ದೆ, ಹಾಗೇಯೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153ಎ, 295, 499, 500, 503, 504, 506 ಮತ್ತು 34ರ ದೂರನ್ನು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯ ಅಧಿಕಾರಿಗಳ ವಿರುದ್ಧ ದೂರನ್ನು ದಾಖಲಿಸಿಕೊಳ್ಳಲು ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ದೂರುನ್ನು ಸಲ್ಲಿಸಲು ವಿನಂತಿಸಿಕೊಂಡಿದ್ದಾರೆ.