ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವು ನಿಶ್ಚಿತ : ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ರಾವಸಾಬ ಐಹೊಳೆ

  • shivaraj bandigi
  • 27 Apr 2024 , 6:19 PM
  • Belagavi
  • 396

ಅಥಣಿ

 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ ಯೋಜನೆ ಶಕ್ತಿ ಯೋಜನೆ ಅನ್ನ ಭಾಗ್ಯ ಯೋಜನೆ ಯುವನಿಧಿ ಯೋಜನೆಗಳು ಉಚಿತ ವಿದ್ಯುತ್ ಯೋಜನೆಗಳು ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ ಆದ್ದರಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ತಮ್ಮ ಅತ್ಯಮೂಲ್ಯವಾದ ಮತವನ್ನು ನೀಡಿ ಜಯಶಾಲಿಯನ್ನಾಗಿಸ್ತಾರೆ ಎಂದು ತಮ್ಮ ಸ್ವಗೃಹದಲ್ಲಿ ಮಾಹಿತಿಯನ್ನು ಹಂಚಿಕೊಂಡರು 

 ನಾಳೆ ಕಾಗವಾಡ ತಾಲೂಕಿನ ಉಗಾರ ಗ್ರಾಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿ. ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಇನ್ನೂ ಹಲವಾರು ಪ್ರಮುಖ ವ್ಯಕ್ತಿಗಳು ಆಗಮಿಸಲಿದ್ದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿ ಸಬೇಕೆಂದು ಮನವಿ ಮಾಡಿದರು

ವರದಿ : ರಾಹುಲ್   ಮಾದರ 

Read All News