ಬೆಳಗಾವಿ :
ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಗುರುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕೋಡಿ ಕಾಂಗ್ರೆಸ್ ನಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು. ಆದರೆ ನನ್ನ ಪುತ್ರಿ ಈಗಲೇ ಚುನಾವಣೆಗೆ ಸ್ಪರ್ಧಿಸಲ್ಲ ಎಂದರು.