ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

  • 15 Jan 2024 , 1:15 AM
  • Belagavi
  • 171

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ, ನಿರ್ಗತಿಕ, ಬಡ ದಲಿತ ಕುಟುಂಬಗಳ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸೋಮವಾರ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಖಾನಾಪುರ ತಾಲೂಕಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬಲೋಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳನ್ನು ತತಕ್ಷಣ ಬಂಧಿಸಬೇಕು. ಅಲ್ಲದೆ, ನಂದಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಚಿಕ್ಕಮುನವಳ್ಳಿ ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿದ ಘಟನೆಯೂ ನಡೆದಿದೆ.

ಈ ಕುರಿತು ಈಗಾಗಲೇ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಎಲ್ಲ ಪ್ರಕರಣಗಳು ನಡೆದರೂ ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರನ್ನು ಅಮಾನತ್ತು ಮಾಡಿ ನಮಗೆ ನ್ಯಾಯ ಕೊಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Read All News