ಬೆಳಗಾವಿ :ರಾಜ್ಯ ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಶ್ರೇಯೋಭಿವೃದ್ಧಿ ಸಂಘ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಕೊಂಡುಸಕೊಪ್ಪ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು.
ಗ್ರಾಪಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲಕ್೯, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಸಿ ದರ್ಜೆಯ ಮೇಲ್ದರ್ಜೆಗೆ ಏರಿಸಬೇಕು ಮತ್ತು ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್ ಮೊದಲಾದ ಹುದ್ದೆಯನ್ನು ಡಿ ದರ್ಜೆಯ ಮೇಲ್ದರ್ಜೆಗೇರಿಸುವ ಮೂಲಕ ನಗರ ಮತ್ತು ಪಪಂ ನಲ್ಲಿರುವಂತೆ ಪಂಚಾಯತ್ ನೌಕರರಿಗೂ ಕನಿಷ್ಠ ವೇತನದ ಬದಲು ವೇತನ ಶ್ರೇಣಿ ನಿಗದಿ ಪಡಿಸಬೇಕು. ಜತೆಗೆ ನೌಕರರು ಮತ್ತು ನೌಕರರ ಅವಲಂಬಿತರಿಗೆ ಸರಕಾರದಿಂದಲೇ ಸೂಕ್ತ ಆರೋಗ್ಯ ಭದ್ರತೆಯೊಂದಿಗೆ ಪಂಚಾಯತ್ ನೌಕರರ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿದರು.