ಅಥಣಿ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ತರಗತಿಗಳು ನಡೆಯುತ್ತಿಲ್ಲಾ ಹೀಗಾಗಿ ಸರ್ಕಾರವು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬಿರುತ್ತಿದೆ.ಹೀಗಾಗಿ ಅಥಣಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರ್ಯಾಲಿ ಮುಖಾಂತರ ಅಥಣಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಮಿನಿವಿಧಾನ ಸೌಧದ ಎದುರಿಗೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿ ರವಿಕುಮಾರ ದನದಮನಿ ಅಥಣಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ನವೆಂಬರ್ 23 ರಿಂದ ಸೇವೆಯಲ್ಲಿ ಕಾಯಂಗಾಗಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸುತ್ತಿದ್ದಾರೆ.ಹೀಗಾಗಿ ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿಲ್ಲ.ಇದರಿಂದಾಗಿ ಸರ್ಕಾರಿನ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬಿರುತ್ತಿದೆ. ಇದು ನಮ್ಮ ಜೀವನದ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ.ಹೀಗಾಗಿ ಸರ್ಕಾರ ಕೂಡಲೆ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ವಿದ್ಯಾರ್ಥಿಗಳು ಮನವಿ ಮೂಲಕ ಒತ್ತಾಯಿಸಿದರು. ಸರ್ಕಾರ ಶೀಘ್ರವಾಗಿ ನಮ್ಮ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಮಾನದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಸಿದರು .
ಈ ವೇಳೆ ತಹಸೀಲ್ದಾರ್ ವಾಣಿ ಯು ಅವರಿಗೆ ಮನವಿಯನ್ನು ಸಲ್ಲಿಸಿದರು ಈ ವೇಳೆ ಪಿಎಸ್ಐ ಶಿವಾನಂದ ಕಾರಜೋಳ ಹಾಗೂ ಸಿಬ್ಬಂದಿ ವರ್ಗದವರು ಬಂದೋಬಸ್ತ್ ಒದಗಿಸಿದ್ದರು.