ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

  • shivaraj bandigi
  • 28 Jun 2024 , 12:26 PM
  • Belagavi
  • 7378

ಬೆಳಗಾವಿ : ಎಸ್‌ಟಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣ. ಖಂಡಿಸಿ, ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆದಿದೆ. 

ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ನಗರದ ಸರ್ದಾರ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಹೊರಟಿರುವ ಬಿಜೆಪಿ ಕಾರ್ಯಕರ್ತರು.

ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಫೋಟೊ ಪ್ರದರ್ಶಿಸಿ, ದಲಿತರಿಗೆ ಅನ್ಯಾಯ ಮಾಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಅಂತಾ ಘೋಷಣೆ ಕೂಗುತ್ತಿದ್ದಾರೆ.

ನೈತಿಕ ಹೊನೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು‌ 

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬ್ಯಾರಿಕೆಡ್ ಅಳವಡಿಸಲಾಗಿದ್ದು, ಕಚೇರಿಗೆ ಮುತ್ತಿಗೆಗೆ ಬಂದ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ತಡೆ ಹಿಡದಿದ್ದಾರೆ. 

ಡಿಸಿ ಕಚೇರಿ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Read All News