ಬೆಳಗಾವಿ :
ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ವಿಕಲಚೇತನರ ಸಚಿವಾಲಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ನವ ಕರ್ನಾಟಕ ವಿಕಲಚೇತನರ ಗೌರವ ಧನ ಕಾರ್ಯಕರ್ತರ ಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದ ಹೊಸ ತಾಲೂಕಾ ಪಂಚಾಯತಿಗಳಿಗೆ ಎಂಆರ್ ಡಬ್ಯೂ ಹುದ್ದೆಯನ್ನು ನೇಮಕ ಮಾಡಿಕೊಂಡಿಲ್ಲ. ಹೊಸ ನೇಮಕಾತಿ ಮಾಡಿಕೊಳ್ಳಲು ಸರಕಾರ ಆದೇಶ ಹೊರಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪುನರ್ವಸತಿ ಯೋಜನೆಯ ಮಾರ್ಗಸೂಚಿಯನ್ನು ತ್ವರಿತ ರೀತಿಯಲ್ಲಿ ತಿದ್ದುಪಡಿ ಮಾಡಿ ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.