ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ದೋಷಿಯಾಗಿರುವ ನಂತರ ಲೋಕಸಭೆಯಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯ ಬಯೋವನ್ನು 'ಡಿಸ್'ಕ್ವಾಲಿಫೈಡ್ ಎಂಪಿ' (ಅನರ್ಹ್ ಸಂಸದ್)ಎಂದು ಬರೆದು ಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ್ ಮತ್ತು ಇತರ ನಾಯಕರು ರಾಜ್‌ಘಾಟ್‌ಗೆ ಆಗಮಿಸಿ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.