ಬೆಂಗಳೂರು: ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ "ಯುವನಿಧಿ" ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಯುವನಿಧಿ ಯೋಜನೆಯ ಅರ್ಹತೆಗಳು:
👉2022-23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
👉6 ತಿಂಗಳಿನಿಂದ ನಿರುದ್ಯೋಗಿಯಾಗಿರಬೇಕು.
👉ಕರ್ನಾಟಕ ರಾಜ್ಯದ ನಿವಾಸಿಯಾದವರು ಮತ್ತು ಕನಿಷ್ಠ 6 ವರ್ಷಗಳಿಂದ ರಾಜ್ಯದಲ್ಲಿ ವಾಸಿಸುತ್ತಿರಬೇಕು.
👉ಶಿಶಿಕ್ಷು (ಅಪ್ರೆಟೀಸ್) ವೇತನ ಪಡೆಯುತ್ತಿರಬಾರದು.
👉ಸರ್ಕಾರಿ/ ಖಾಸಗಿ ಉದ್ಯೋಗ ಪಡೆದಿರಬಾರದು.
👉ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರಬಾರದು.
ಯುವನಿಧಿ ಯೋಜನೆಯ ಪ್ರಯೋಜನಗಳು:
ಪದವಿ ಪದವೀಧರರಿಗೆ ಪ್ರತಿ ತಿಂಗಳು ₹3,000 ಭತ್ಯೆ
ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ₹1,500 ಭತ್ಯೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆ ಹೊಂದಿರುವ ಯುವಕ ಯುವತಿಯರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪೋರ್ಟಲ್‌ನಲ್ಲಿ 'ಯುವನಿಧಿ' ಯೋಜನೆ ಆಯ್ಕೆ ಮಾಡಬೇಕು.
ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಅರ್ಜಿ ಸಲ್ಲಿಸಿದ ನಂತರ, ಅರ್ಜಿ ಪ್ರಕ್ರಿಯೆಗೊಳ್ಳುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಭತ್ಯೆ ನೀಡಲಾಗುತ್ತದೆ.
ಯುವನಿಧಿ ಯೋಜನೆಯು ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ತುಂಬಾ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯು ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಅವರಿಗೆ ಉದ್ಯೋಗ ಪಡೆಯಲು ಸಹಾಯ ಮಾಡುತ್ತದೆ.