ಬೆಂಗಳೂರು:ಖ್ಯಾತ ನಟ, ರಾಜಕಾರಣಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 20 ದಿನಗಳಿಂದ ಶಿವರಾಮ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ಕೆ ಶಿವರಾಮ್ ನಟನಾಗಿ ಅಷ್ಟೇ ಅಲ್ಲದೇ ಉತ್ತಮ ರಾಜಕಾರಣಿಯಾಗಿಯೂ ಜನಪ್ರಿಯತೆ ಪಡೆದಿದ್ದರು.